Skip to main content

ಪತ್ರಂ ಪುಷ್ಪಂ ಫಲಂ ತೋಯಂ

"ಪತ್ರಂ ಪುಷ್ಪಂ ಫಲಂ ತೋಯಂ" ಎಂಬ ಭಗವದ್ಗೀತೆಯ ವಾಕ್ಯವನ್ನು ಸೂಚ್ಯವಾಗಿ ಹೇಳಿರುವ ಭಕ್ತಿ ಸಮರ್ಪಣೆಯನ್ನು ಈ ಕೆಳಕಂಡಂತೆ ನಾಲ್ಕು ರೀತಿಗಳಾಗಿ ವಿಶ್ಲೇಷಿಸಬಹುದು.


ಪತ್ರಂ - ಶ್ರೀಕೃಷ್ಣನನ್ನು ತನ್ನವನನ್ನಾಗಿ ಮಾಡಿಕೊಳ್ಳಲು ತುಲಾಭಾರ ಮಾಡಿದಾಗ ಸತ್ಯಭಾಮೆಯ ತನ್ನಲ್ಲಿರುವ ಆಗರ್ಭ ಚಿನ್ನ, ವಜ್ರಗಳ, ವೈಡೂರ್ಯಗಳ ಆಭರಣಗಳಿಗೆ ಸಮತೂಕನಾಗದ ಶ್ರೀಕೃಷ್ಣ ರುಕ್ಮಿಣಿಯು ಭಕ್ತಿಯಿಂದ ಸಮರ್ಪಿಸಿದ ತುಳಸಿಯೆಂಬ ಪತ್ರೆಗೆ ಒಲಿದು ಬಂದಿದ್ದು ಗಮನಿಸಿದಾಗ ದೇವರಿಗೆ ಆಭರಣಗಳಿಂದ ಮೆಚ್ಚಿಸಲಾಗುವುದಿಲ್ಲ ಎಂದು ಮನವರಿಕೆಯಾಗುತ್ತದೆ.


ಪುಷ್ಪಂ - ಗಜೇಂದ್ರನೆಂಬ ಆನೆಯ ಕಾಲನ್ನು ಕೊಳದಲ್ಲಿದ್ದ ಮೊಸಳೆಯು ಕಚ್ಚಿ ಹಿಡಿದಾಗ ತನ್ನ ಪೂರ್ವಜನ್ಮದ ಪುಣ್ಯ ಸ್ಮರಣೆಯಿಂದ ನೆನೆದು ದೇವರನ್ನು ಅನನ್ಯ ಭಕ್ತಿಯಿಂದ ಪ್ರಾರ್ಥಿಸಿ ಕೊಳದಲ್ಲಿಯೇ ಕೈಗೆ ಸಿಕ್ಕ ತಾವರೆಯನ್ನು ದೇವರಿಗೆ ಒಪ್ಪಿಸಿದಾಗ, ಮಹಾವಿಷ್ಣುವು ಗಜೇಂದ್ರನನ್ನು ರಕ್ಷಿಸಿದ ಕಥೆ ಎಲ್ಲರಿಗೂ ಗೊತ್ತಿರುವುದೇ.


ಫಲಂ - ರಾಮಾಯಣ ಕಾಲದಲ್ಲಿ ಶಬರಿಯು ಅನನ್ಯ ಭಕ್ತಿಯಿಂದ ಶ್ರೀರಾಮನಿಗೆ ಉತ್ಕೃಷ್ಟ ಹಣ್ಣು ಕೊಡುವ ಉದ್ದೇಶದಿಂದ ಪ್ರತಿ ಹಣ್ಣನ್ನು ಕಚ್ಚಿ ರುಚಿಯನ್ನು ನೋಡಿ ಚೆನ್ನಾಗಿರುವುದನ್ನು ಆರಿಸಿ ಸಮರ್ಪಿಸಿ ಮೋಕ್ಷವನ್ನು ಪಡೆದುದನ್ನು ಕಂಡಾಗ ದೇವರಿಗೆ ಭಕ್ತಿಯ ಹೊರತು ಬೇರೇನು ಬೇಡ ಎಂದು ತಿಳಿಯುತ್ತದೆ.


ತೋಯಂ - ಬಲಿಚಕ್ರವರ್ತಿಯು ದಾನ ಬೇಡಿದ ವಾಮನನಿಗೆ ತಾನು ನಿಂತಿರುವ ಭೂಮಿಯನ್ನು ಸಹ ತೋಯಂ ಎಂದರೆ ಒಂದು ತೊಟ್ಟು ನೀರಿನ ಮೂಲಕ ದಾನ ಮಾಡಿ ಪಾತಾಳಕ್ಕೆ ಹೊರಟುಹೋದ ಕಥೆಯನ್ನು ಕೇಳಿದ್ದೇವೆ ಅದನ್ನು ದೀಪಾವಳಿ ಹಬ್ಬವಾಗಿ ಆಚರಣೆ ಮಾಡುತ್ತಿದ್ದೇವೆ. ಈಗಲೂ ಸಹ ಯಾವುದೇ ದಾನ ಸಮರ್ಪಣೆ ನೀರಿನ ತೊಟ್ಟಿನೊಂದಿಗೆ ಮಾಡುವುದು ಪದ್ಧತಿಯಾಗಿದೆ.


ಈ ಕಥಾ ದೃಷ್ಟಾಂತಗಳ ಮೂಲಕ ದೇವರು ನೀವು ಕೊಡುವ ಯಾವುದೇ ಬೆಲೆಬಾಳುವ ವಸ್ತುಗಳನ್ನು ಆಹಾರ ಪದಾರ್ಥಗಳನ್ನು ಅಪೇಕ್ಷಿಸುವುದಿಲ್ಲ ಬೇಕಾಗಿರುವುದು ನಿಮ್ಮ ನಿಷ್ಕಲ್ಮಶ ಭಕ್ತಿ ಮಾತ್ರ. ಭಕ್ತಿಯೆಂದರೆ ನಿಮ್ಮನ್ನು ನೀವು ದೇವರಿಗೆ ಸಮರ್ಪಣೆ ಮಾಡಿಕೊಳ್ಳುವುದು ಎಂದರ್ಥ. ಅಂದರೆ ಯಾವುದೇ ಕೆಲಸವನ್ನು ಮಾಡುವುದಾದರೂ ಅದನ್ನು ಶ್ರದ್ಧೆ ಮುಖ್ಯ.ಭಕ್ತಿಯಿಂದ ಮಾಡಿದಾಗ ಮಾತ್ರ ಹಿಡಿದ ಕೆಲಸ ಕೈಗೂಡುತ್ತದೆ.

Comments

  1. ದೇವರು ಭಕ್ತಿಯನ್ನು ಬಿಟ್ಟು ಬೇರೆ ಏನನ್ನು ಅಪೇಕ್ಷಿ ಸುವುದಿಲ್ಲ

    ReplyDelete
  2. The story gives more interesting information. Thank you.

    ReplyDelete
  3. ಭಗವದ್ಗೀತೆಗೆ   ಟಿಪ್ಪಣಿ   ಬರೆದ,  ಶ್ರೀ  ಶಂಕರರಾದಿಯಾಗಿ   ಯಾವ   ಅನುವಾದಕರಿಗೂ,  ಮತ್ತು   ಸ್ವತಃ    ವೇದವ್ಯಾಸರಿಗೂ   ಗೋಚರಿಸದ   ಅರ್ಥ   ವಿಶ್ಲೇಷಣೆ   ಎನ್ನಲಡ್ಡಿಯಿಲ್ಲ.    ಹಿರಿಯಣ್ಣ   ಕೆ  ಪಿ

    ReplyDelete

Post a Comment

Popular posts from this blog

ಆರೋಗ್ಯ ಕವಚ

ಮನುಷ್ಯ ತಾನು ಸುಖವಾಗಿರಲು ದುಡಿಯುತ್ತಾನೆ. ಹಣ ಕೂಡಿಡುತ್ತಾನೆ. ಆಸ್ತಿ ಗಳಿಸುತ್ತಾನೆ. ತಾನು ಮತ್ತು ತನ್ನ ಪ್ರೀತಿಯ ಕುಟುಂಬವನ್ನು ಸುಖವಾಗಿಡುವ ಕನಸುಗಳು ಸದಾ ನಡೆಯುತ್ತಲೇ ಇರುತ್ತವೆ. ಈ ಕನಸಿನ ಮಾರ್ಗದಲ್ಲಿ ಆಕಸ್ಮಿಕವಾಗಿ ಅವನ ದೇಹಕ್ಕೆ ದೊಡ್ಡ ಅನಾರೋಗ್ಯವೇನಾದರೂ ಎದುರಾದರೆ ಬಹಳ ಕಷ್ಟವಾಗುತ್ತದೆ. ಸುಧಾರಿಸಿಕೊಳ್ಳಲು ಸಾಧ್ಯವಾಗದಂತೆ ಗಳಿಸಿದ್ದೆಲ್ಲವೂ ನೀರಿನಂತೆ ಕರಗಿ ಹೋಗುತ್ತದೆ. ಇದರಿಂದ ಜೀವನದಲ್ಲಿ ಹಾಕಿಕೊಂಡ ಗುರಿಯನ್ನು ಸಾಧಿಸಲಾಗುವುದಿಲ್ಲ. ಇಂತಹ ಪರಿಸ್ಥಿತಿಯನ್ನು ಆರ್ಥಿಕವಾಗಿ ಸಮರ್ಥವಾಗಿ ಎದುರಿಸಲು ಬೇಕಾಗಿರುವುದು ಆರೋಗ್ಯ ವಿಮೆ. ಇದನ್ನು ಹೆಲ್ತ್ ಇನ್ಶುರೆನ್ಸ್ ( Heath Insurance) ಅಥವಾ ಮೆಡಿಕಲ್ ಇನ್ಸೂರೆನ್ಸ್ (Medical Insurance) ಎಂದೂ ಹೇಳಲಾಗುತ್ತದೆ. ಇದು ಆರೋಗ್ಯ ರಕ್ಷಣೆಗಾಗಿ ಎಂದೇ ಪಡೆದರೂ ಮುಂದಿನ ನಮ್ಮ ಜೀವನಕ್ಕಾಗಿ, ಪರೋಕ್ಷವಾಗಿ ಕೂಡಿಟ್ಟಿರುವ ಆಸ್ತಿಯನ್ನು ರಕ್ಷಣೆ ಮಾಡುತ್ತದೆ. ಈ ಬಗ್ಗೆ ತಿಳಿದುಕೊಳ್ಳಬೇಕಾದ ವಿಷಯಗಳು ಬಹಳ ಅನಿವಾರ್ಯ. ಇವೆಲ್ಲವನ್ನೂ ಸವಿಸ್ತಾರವಾಗಿ ತಿಳಿಸಿ ಹೇಳುವ ಪ್ರಯತ್ನವೇ ಈ ಲೇಖನ. ಆರೋಗ್ಯ ವಿಮೆ ಎಂದರೇನು? ನಾವು ಸದಾ ಆರೋಗ್ಯದಿಂದ ಇರಬೇಕೆಂದು ಬಯಸುವೆವಾದರೂ "ಮನುಷ್ಯ ಎಂದಮೇಲೆ ಏನಾದರೂ ಕಾಯಿಲೆ ಇದ್ದೇ ಇರುತ್ತದೆ" ಎಂಬಂತೆ ಹಲವು ಸಾರಿ ತಲೆನೋವು, ಜ್ವರ, ನೆಗಡಿ ಮೈ ಕೈ ನೋವು ಎಂದು ನರಳುತ್ತೇವೆ. ಚಿಕೂನ್ ಗುನ್ಯಾ, ಡೆಂಗ್ಯೂ, ಕೊರೋನಾ ಇತ್ಯಾದಿ ಕಾಯಿಲೆಗಳ...

ಮಿತ್ರನೊಬ್ಬನ ಆತ್ಮಾವಲೋಕನ

ಮಿತ್ರ ಶಂಕರ ಒಮ್ಮೆ ಹೇಳಿದ್ದ, ಕೇಳಿ ಹಳತಾದರೂ ಓದುಗರಿಗೆ ಹೊಸತಾಗಿ, ಆತ್ಮೊನ್ನತಿಗೆ ಸಹಾಯ ವೆನಿಸುವ, ಆತ್ಮಾವಲೋಕನದ ಸಾಲುಗಳು ನಿಜವಾಗಿಯೂ ಕುತೂಹಲಕಾರಿಯಾಗಿದೆ. ಅದನ್ನು ಅವನಿಂದಲೇ ಕೇಳಿ: ಕಛೇರಿಯಲ್ಲಿ ವಿಶೇಷವಾದ ಕೆಲಸವೊಂದನ್ನು ನಿರೀಕ್ಷೆಗಿಂತ ಮೊದಲೇ ಯಶಸ್ವಿಯಾಗಿ ಪೂರೈಸಿದ್ದರಿಂದ ತುಂಬಾ ಸಂತೋಷವಾಗಿತ್ತು. ಆದ್ದರಿಂದ ಮನೆಗೆ ಸ್ವಲ್ಪ ಬೇಗನೆ ಬಂದಿದ್ದೆ. ಪ್ರತಿದಿನ ಯಾಕೆ ಲೇಟು ಎಂಬ ಮುಖವನ್ನು ಮಾಡುತ್ತಿದ್ದ ಮಡದಿ ಪ್ರೇಮ ಕೊಟ್ಟ ಒಂದು ಬಿಸಿಯಾದ ಸ್ಟ್ರಾಂಗ್ ಕಾಫಿ ಕುಡಿದು ನಿಧಾನವಾಗಿ ಸೋಫಾದ ಮೇಲೆ ಕಾಲು ಚಾಚುತ್ತಿದ್ದಂತೆಯೇ ನಿದ್ರಾ ದೇವಿಗೆ ವಶನಾಗಿ ಕೆಲವು ಸಮಯವಾಗಿರಬಹುದು. ಕೆಲವೇ ನಿಮಿಷಗಳಲ್ಲಿ ನಿದ್ದೆ ಬಂದಿತ್ತಾದರೂ ತಾಳಲಾರೆನೆಂಬ ಎದೆನೋವು, ಇದ್ದಕ್ಕಿದ್ದಂತೆ ಉಸಿರುಗಟ್ಟಿಸುವಂತಹ ಅನುಭವ. ಏನು ಗೊತ್ತಾಗುತ್ತಿಲ್ಲ. ಕೆಲವೇ ನಿಮಿಷಗಳಲ್ಲಿ ಗಾಬರಿಯಿಂದ ಪ್ರೇಮಾ, ಮಗಳು - ಅಳಿಯನನ್ನು ಕರೆಯುತ್ತಿದ್ದಾಳೆ. ಕಾಲು ಕೈ ಎದೆ ಭಾಗಗಳನ್ನು ಹಿತವಾಗಿ ಯಾರೋ ತಡವುತ್ತಿದ್ದಾರೇನೋ. ಹಾಗೆಯೇ ನನ್ನನ್ನು ಎತ್ತಿದಂತಹ ಅನುಭವ. ಎಲ್ಲಿಗೋ ಕರೆದುಕೊಂಡು ಹೋಗುತ್ತಿರಬಹುದು. ಯಾವುದೋ ವಾಹನದ ಸದ್ದು. ನನ್ನ ಕೈಗಳನ್ನು ಯಾರೋ ಎತ್ತುತ್ತಿದ್ದಾರೆ, ಏನಾಗುತ್ತಿದೆ? ಹೊಸತರದ ಹಾಸಿಗೆ. ಮೂಗು ಬಾಯಿಗೆ ಏನೋ ತಡೆ. ಸಣ್ಣದಾಗಿ ಬಿಟ್ಟು ಬಿಟ್ಟು ಕೇಳುವ ಏಕತಾನದ ಸದ್ದು. ಹಠಾತ್ತಾಗಿ ನಿಶ್ಯಬ್ದ. ನೀರವ ವಾತಾವರಣ. ಈಗ ನನಗೆ ನೋವು ಇದೆಯೇ. ಟಿವಿಯಲ್ಲಿ ಯಾವುದೋ ಕ...

ಬಾಳ ರೂಪಿಸಿದ ವಿಮೆ

ನಾವು ಸಮಾಜದಲ್ಲಿ ನಮಗಾಗಿ ನಾವು ಅನೇಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ. ಅದನ್ನು ಒದಗಿಸಲು ಅದರದೇ ಆದ ಸಂಸ್ಥೆ ಹಾಗೂ ಸೇವಾ ಸಿಬ್ಬಂದಿಗಳಿದ್ದಾರೆ. ಇವು ನಮ್ಮ ಬದುಕು ಸುಗಮವಾಗಲು ಸಹಾಯಕವಾಗಿ ವೆ . ಇವಲ್ಲದೆ  ಜೀವನದಲ್ಲಿ ನಮ್ಮ ಉನ್ನತಿಗೆ ಬಂಧುಮಿತ್ರರ ಪಾತ್ರ ತೀರಾ ಸಾಮಾನ್ಯ. ಆದರೆ ಸಂಸ್ಥೆಯೊಂದು ಕೊಡುವ ಸೇವೆಯೇ ಒಬ್ಬರ ಬದುಕನ್ನು ರೂಪಿಸಿಕೊಳ್ಳಲು ಅವಕಾಶವಾದ  ಘಟನೆಯ ಸ್ಮರಣೆಯೇ ಈ ಕಥೆಯ ಜೀವಾಳ. ಈ ಬೆಳಿಗ್ಗೆ ಬೆಂಗಳೂರಿನಿಂದ ಲಂಡನ್ ವರೆಗಿನ ಆಕಾಶ ಪಯಣ. ಇದಕ್ಕಾಗಿ ನಿನ್ನೆಯಿಂದಲೇ ನಿದ್ದೆ ಇಲ್ಲ. ರಾತ್ರಿ ಪೂರ್ತಿ ವಿಮಾನ ನಿಲ್ದಾಣದಲ್ಲಿ ಸಮಯ ಕಳೆದೆವು. ಲಂಡನ್ನಿನ ಸಮಯದಂತೆ ಮಧ್ಯಾಹ್ನವೇ ಬಂದೆವು. ಅಮೇರಿಕಾಕ್ಕೆ ಹೋಗುವ ವಿಮಾನ ಸಂಜೆ ಐದು ಗಂಟೆಗೆ. ಆದ್ದರಿಂದ ಕಾಯಲೇಬೇಕು. ವಿಮಾನ ನಿಲ್ದಾಣದಲ್ಲಿ ಆಯಾಸದಿಂದ ನಿದ್ದೆ ಬರುತ್ತಿದ್ದರೂ ಎಚ್ಚರವಾಗದಷ್ಟು ನಿದ್ದೆ ಬಂದು ಮುಂದಿನ ವಿಮಾನ ತಪ್ಪಿ ಹೋದರೆ ಎಂಬ ಭಯದಿಂದ ಕಣ್ಣು ಮುಚ್ಚಲಿಲ್ಲ. ಈಗ ಅಮೇರಿಕಾದ ವಾಶಿಂಗ್ಟನ್ಗೆ ಹೋಗುವ ವಿಮಾನದಲ್ಲಿ ಕುಳಿತಿದ್ದೇನೆ. ಪಕ್ಕದಲ್ಲಿ ಕುಳಿತ ನಮ್ಮವರಿಗೆ ಗಾಢ ನಿದ್ರೆ. ವಿಮಾನ ಪ್ರಯಾಣವೇನೋ ಹೆಮ್ಮೆಯ ವಿಷಯವೇ. ಆದರೆ ಇದೇ ಮೊದಲ ಪ್ರಯಾಣವಾದ್ದರಿಂದ ಏನೋ ಆತಂಕ, ಸಂತೋಷ, ದುಗುಡ ಜೊತೆಗೆ ಸಡಗರ. ಸುತ್ತ ನೋಡುತ್ತಾ ನನ್ನ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ನಾನು ಎಲ್ಲಿದ್ದೇನೆ. ಎಲ್ಲಿಗೆ ಬಂದೆ. ಇರುವನೊಬ್ಬ ಮಗ ಆನಂದನೇ ನಮಗೆ ಸರ್ವಸ್ವ. ಆದ್ದ...